ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸೈನ್ಯಕ್ಕೆ ಸೇರಲು ಆಸಕ್ತಿ ವಹಿಸಬೇಕು : ಕರ್ನಲ್ ನಾರಾಯಣ ಮೂರ್ತಿ
ಚೆಯ್ಯ0ಡಾಣೆ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಂಡು ಮುಂದಿನ ದಿನಗಳಲ್ಲಿ ಸೈನ್ಯಕ್ಕೆ ಸೇರುವವರಾಗಬೇಕೆಂದು ನಿವೃತ ಕರ್ನಲ್ ನಾರಾಯಣ ಮೂರ್ತಿ ಹೇಳಿದರು.
ಚೆಯ್ಯಂಡಾಣೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದರ ಮೂಲಕ ಉತ್ತಮ ಪ್ರಜೆಗಳಾಗಬೇಕು, ಪೋಷಕರೂ ಕೂಡ ಶಾಲೆಗಳಿಗೆ ಬಂದು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಓದಿ ವಿದ್ಯಾರ್ಥಿಗಳಿಗೆ ಮಾರ್ಗ ದರ್ಶಕರಾಗ ಬೇಕೆಂದು ಕಿವಿಮಾತು ಹೇಳಿದರು.
ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಇಂದು ನಾವು 75ನೇ ಗಣರಾಜ್ಯವನ್ನು ಆಚರಿಸುತ್ತಿದ್ದೇವೆ.ಸಂವಿಧಾನ ಶಿಲ್ಪಿ ಡಾ :ಅಂಬೇಡ್ಕರ್ ಅವರನ್ನು ನೆನೆಯುತ್ತ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದರ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕೆಂದರು.
ಮಾತ್ತೋರ್ವ ಮುಖ್ಯ ಅತಿಥಿ ಪತ್ರಕರ್ತ ಅಶ್ರಫ್ ಹಾಗೂ ಸ್ಥಳೀಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ದಿನದ ಮಹತ್ವದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶಾಲೆಗೆ ಪುಸ್ತಕ ಕೊಡುಗೆ:
ಶಾಲೆಯ ಗ್ರಂಥಾಲಯಕ್ಕೆ ನಿವೃತ ಕರ್ನಲ್ ನಾರಾಯಣ ಮೂರ್ತಿ ಹಾಗೂ ಅವರ ಧರ್ಮಪತ್ನಿ 10. ಸಾವಿರಕ್ಕೂ ಹೆಚ್ಚು ಬೆಲೆಬಾಳುವ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನೀಡಿದರು.
ವಿದ್ಯಾರ್ಥಿಗಳು ಅತಿಥಿಗಳನ್ನು ಅದ್ದೂರಿಯಾಗಿ ಡಂಬಲ್ಸ್ ಮೂಲಕ ಸ್ವಾಗತಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿಗೀತೆ, ನಾಡಗೀತೆ,ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
ಅತಿಥಿಗಳು ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಬಹುಮಾನ ಹಾಗೂ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರತ್ನಾ,ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ವಿನೋದ್ ನಾಣಯ್ಯ,ಸದಸ್ಯರಾದ ರಾಜೇಶ್ ಅಚ್ಚಯ್ಯ,ಈರಪ್ಪ,ಪುಷ್ಪ,ವಾಣಿ, ಮಂಜುಳಾ,ಶ್ರೀಮತಿ ಕರ್ನಲ್ ನಾರಾಯಣ ಮೂರ್ತಿ,ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಭವ್ಯ,ಶಿಕ್ಷಕಿ ದಮಯಂತಿ, ಪೋಷಕರು, ವಿದ್ಯಾರ್ಥಿಗಳು ಮತಿತ್ತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಜಯಪ್ರದ ನಿರೂಪಿಸಿ,ಸತ್ಯಮ್ಮ ವಂದಿಸಿದರು.