Reading Time: 2 minutes
ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಚೇಲಾವರ ಪೊನ್ನೋಲ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಟ್ರಾಕ್ ಸೂಟ್ ಅನ್ನು ನಿವೃತ್ತ ಕರ್ನಲ್ ನಾರಾಯಣ ಮೂರ್ತಿ ಹಾಗೂ ಶ್ರೀಮತಿ ಜಯಲಕ್ಷ್ಮಿ ನಾರಾಯಣ ಮೂರ್ತಿ,ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷರಾದ ಬಿದ್ದಂಡ ರಾಜೇಶ್ ಅಚ್ಚಯ್ಯ,ನರಿಯಂದಡ ಕೇಂದ್ರ ಪ್ರೌಢಶಾಲೆಯ ಅಧ್ಯಕ್ಷ ಚೇನಂಡ ಗಿರೀಶ್ ಪೂಣಚ್ಚ,ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಪತ್ರಕರ್ತ ಅಶ್ರಫ್ ಸಿ.ಎ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಆರ್.ಆಶಾ ಕುಮಾರಿ, ಶಾಲಾ ಹಿರಿಯ ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ, ಹಿರಿಯ ಸಹ ಶಿಕ್ಷಕಿ ಪಿ.ಎಂ. ದಮಯಂತಿ, ಸಹ ಶಿಕ್ಷಕಿ ಎ.ಜೆ.ಜಯಪ್ರಧ ರವರು ಸುಮಾರು 40 ಸಾವಿರ ಮೌಲ್ಯದ ಟ್ರಾಕ್ ಸೂಟ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ.
ಈ ಸಂದರ್ಭ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರತ್ನಾ, ಎಸ್ ಡಿ ಎಂ ಸಿ ಸದಸ್ಯರು,ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.