ಚೆಯ್ಯ0ಡಾಣೆ: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಚೆಸ್ಕಾಂ ನಿರ್ಲಕ್ಷ್ಯದಿಂದ ನೀರು ದೊರೆಯುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಅಚ್ಚಯ್ಯ ಆರೋಪಿಸಿದ್ದು, ಲೋಕಾಯುಕ್ತಕ್ಕೆ ದೂರು ನೀಡಲು ಮುಂದಾಗಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ರಾಜೇಶ್ ಅಚ್ಚಯ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಟ್ರಾನ್ಸ್ಫಾರ್ಮರ್ ಆಳವಡಿಸಿದ್ದು, ಮೀಟರ್ ಕೂಡ ಅಳವಡಿಸಲಾಗಿದೆ. ಆದರೆ ಚೆಸ್ಕಾಂ ನಿರ್ಲಕ್ಷ್ಯತೋರಿ ಪವರ್ ಸಪ್ಲೈ ಮಾತ್ರ ನೀಡುತ್ತಿಲ್ಲ,ಈ ಬಗ್ಗೆ ಮಾನ್ಯ ಶಾಸಕರ ಗಮನಕ್ಕೆ ತಂದ ಸಂದರ್ಭ ಕೂಡಲೇ ಚೆಸ್ಕಾಂ ಇಲಾಖೆಗೆ ಕ್ರಮ ಕೈಗೊಳ್ಳಲು ಶಾಸಕರು ತಿಳಿಸಿದ್ದರು. ಆದರೂ ಇದುವರೆಗೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಂಚಾಯತಿ ವ್ಯಾಪ್ತಿಯ ತಟ್ಟಮಕ್ಕಿ ಪೈಸಾರಿಗೆ 15 ದಿನದಿಂದ ನೀರಿಲ್ಲದೆ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಿಂದ ಗ್ರಾಮ ಪಂಚಾಯಿತಿ ಸದಸ್ಯನಾದ ನಾನು ಲೋಕಾಯುಕ್ತಕ್ಕೆ ದೂರು ನೀಡಲು ಮುಂದಾಗಿದ್ದೇನೆ ಎಂದರು.