ಹೊದ್ದೂರಿನಲ್ಲಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

ಹೊದ್ದೂರು: ನಾಪೋಕ್ಲು ಬಳಿಯ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನರೇಗಾ ಯೋಜನೆಯಡಿ 10ಲಕ್ಷರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡವನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂಥರ್ ಗೌಡ ಅವರು ಲೋಕಾರ್ಪಣೆಗೊಳಿಸಿದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಬಳಿಕ ಮಾತನಾಡಿದ ಶಾಸಕರು ಅಂಗನವಾಡಿ ಕೇಂದ್ರದಲ್ಲಿ ಸಿಗುವ ಸೌಲಭ್ಯವನ್ನು ಗ್ರಾಮದ ಜನರು ಪಡೆದುಕೊಳ್ಳಬೇಕು.ತಮ್ಮ ಮೂರು ವರ್ಷದಿಂದ ಆರು ವರ್ಷದೊಳಗಿನ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರವನ್ನು ಇಲ್ಲಿ ನೀಡಲಾಗುತ್ತದೆ.ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು. ಸರ್ಕಾರದಿಂದ ಅನುಷ್ಠಾನ ಗೊಳ್ಳುವ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ದೊರಕಿಸಿಕೊಡಬೇಕು. ಅದರಂತೆ ಅಂಗನವಾಡಿ ಕೇಂದ್ರ ಹಾಗೂ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಸ್ಥಳದಲ್ಲಿದ್ದ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಮಂತರ್ ಗೌಡ ಸೂಚಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ಎ.ಹಂಸ ಗ್ರಾಮದ ಜನರು ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ದಾಖಲು ಮಾಡಿ ಇಲಾಖೆಯಿಂದ ದೊರಕುವ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಮಾತನಾಡಿ ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗ ಬಾರದು.ಮಕ್ಕಳು ವಿದ್ಯೆ ವಿನಯ ಎಂಬುದನ್ನು ಮೊದಲು ಕಲಿಯುವುದು ಅಂಗನವಾಡಿ ಕೇಂದ್ರದಿಂದಾಗಿದೆ ಎಂದರು.

ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಸೀತಾಲಕ್ಷ್ಮಿ ಮಾತನಾಡಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಅದರ ಸೌಲಭ್ಯವನ್ನು ಫಲಾನುಭವಿಗಳು ಪಡೆದುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತಿಹೊಂದಿದ ಅಂಗನವಾಡಿ ಕಾರ್ಯಕರ್ತೆ ಸರಸ್ವತಿ,ಇಂಜಿನಿಯರ್ ಕುಮಾರಿ ನವಾನಿ, ಹಾಗೂ ಕರುಣಾಕರ್ ರೈ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನುರಾಧ,ಸ್ಥಾಯಿ ಸಮಿತಿ ಅಧ್ಯಕ್ಷ ಮೊಣ್ಣಪ್ಪ,ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಕುಸುಮಾವತಿ,ಸದಸ್ಯರಾದ ಹಮೀದ್, ಲಕ್ಷ್ಮಿ,ಸರಸು, ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಪವಿತ್ರ, ಕಾರ್ಯದರ್ಶಿ ಆಶಾಲತಾ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಮಮತ, ಅಂಗನವಾಡಿ ಶಿಕ್ಷಕಿ ಶೋಭಾ ಹಾಗೂ ಅಂಗನವಾಡಿ,ಆಶಾ ಕಾರ್ಯಕರ್ತೆಯರು, ಸಹಾಯಕಿಯರು, ಪೋಷಕರು, ಮಕ್ಕಳು,ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶೀಲಾ ಲೋಕೇಶ್ ಸ್ವಾಗತಿಸಿ, ಆಶಾಲತಾ ನಿರೂಪಿಸಿ ವಂದಿಸಿದರು.

ಝಕರಿಯ ನಾಪೋಕ್ಲು

0 0 votes
Article Rating
Subscribe
Notify of
guest
0 Comments
Inline Feedbacks
View all comments