ವಿನೋದ್. ಜಿ.ಕೆ, ಅಧ್ಯಕ್ಷರು: ಗ್ರಾ.ಪಂ. ಐಗೂರು
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಐಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ವಿನೋದ್. ಜಿ.ಕೆ. ಅವರನ್ನು “ಸರ್ಚ್ ಕೂರ್ಗ್ ಮೀಡಿಯಾ” ದ “ನಮ್ಮ ಕೊಡಗು-ನಮ್ಮಗ್ರಾಮ” ಅಭಿಯಾನದಡಿಯಲ್ಲಿ ಸಂದರ್ಶಿಸಿ ಮಾಹಿತಿಯನ್ನು ಪಡೆಯಲಾಯಿತು.
“ಸರ್ಚ್ ಕೂರ್ಗ್ ಮೀಡಿಯಾ” ದೊಂದಿಗೆ ಮಾತನಾಡಿದ ವಿನೋದ್ .ಜಿ.ಕೆ. “ “ನಾನು ಜನಪ್ರತಿನಿಧಿಯಾಗಿ ರಾಜಕೀಯ ಕ್ಷೇತ್ರಕ್ಕೆ ಬರಲು ಕಾರಣವೇನೆಂದರೆ ನಾನು ಈ ಮೊದಲು ರಾಷ್ರ್ಟೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿದ್ದು, ಗ್ರಾಮದ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯನಾಗಿದ್ದೆ, ನನ್ನ ಈ ಕಾರ್ಯವನ್ನು ಗಮನಿಸಿದ ಹಿರಿಯರು ಹಾಗೂ ಗ್ರಾಮಸ್ಥರ ಒತ್ತಾಸೆಯ ಮೇರೆಗೆ 2020 ರಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಐಗೂರು-1 ವಾರ್ಡ್‌ನಿಂದ ಸ್ಪರ್ಧಿಸಿ ಒಟ್ಟು 725 ಮತಗಳಲ್ಲಿ 565 ಮತಗಳನ್ನು ಪಡೆದು ಅತ್ಯಧಿಕ ಬಹುಮತದಿಂದ ಗೆಲುವನ್ನು ಸಾಧಿಸಿ ಐಗೂರು ಗ್ರಾಮ ಪಂಚಾಯಿತಿಯ ಸದಸ್ಯನಾಗಿ ಆಯ್ಕೆಯಾದೆ. ಮೊದಲ ಎರಡೂವರೆ ವರ್ಷದ ಅವಧಿಗೆ ಸದಸ್ಯನಾಗಿ ಕಾರ್ಯನಿರ್ವಹಿಸಿ ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದೇನೆ.
ಸರಿ ಸುಮಾರು 50ಲಕ್ಷದಷ್ಟು ಶಾಸಕರ ಅನುದಾನದಲ್ಲಿ ಕೆಲಸಗಳು ಪೂರ್ಣಗೊಂಡಿದ್ದು,15ನೇ ಹಣಕಾಸು ಯೋಜನೆಯಡಿಯಲ್ಲಿಯೂ ಕೂಡ 80ಲಕ್ಷದ ಕಾಮಗಾರಿಗಳು ಪೂರ್ಣಗೊಂಡಿದ್ದೆ. ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ 30ಲಕ್ಷದವರಗೆ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ.
ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ಮಿತಿ ಮೀರಿದ್ದು, ರೈಲ್ವೆ ಕಂಬಿಗಳಿಂದ ಬ್ಯಾರಿಕಾಡ್ ನಿರ್ಮಿಸಿದ್ದರೂ, ಸೋಲಾರ್ ಬೇಲಿ ಅಳವಡಿಸಿದ್ದರೂ ಆನೆಗಳು ಅದನ್ನೂ ಲೆಕ್ಕಿಸಿದೆ. ಕಾಡಿನಂಚಿನಿಂದ ತೋಟಗಳು, ರಸ್ತೆಗಳು ಹಾಗೂ ಪಟ್ಟಣದೊಳಗೆ ದಾಳಿಯಿಡುತ್ತಲೆ ಇದೆ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯೊಂದಿದೆ ಸಮಾಲೋಚಿಸಿ ಮುಂದಿನ ಪರಿಹಾರದ ಬಗ್ಗೆ ಹೆಜ್ಜೆಯಿಟ್ಟ್ಟಿದ್ದೇವೆ.
ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರಿನ ಯೋಜನೆಯು ಶೇಕಡ 50% ಆಗಿದೆ. ಇನ್ನು ಶೇಕಡ 50% ರಷ್ಟು ಭಾಗ ಕಾಮಗಾರಿಯು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಹಾಗೆ ಸ್ವಚ್ಚಭಾರತ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ಶೌಚಾಲಯ ನಿರ್ಮಾಣ ಕಾಮಗಾರಿಯು ಶೇಕಡ 100%ರಷ್ಟು ಪೂರ್ಣಗೊಂಡಿದೆ.
ಮಡಿಕೇರಿ -ಸೋಮವಾರಪೇಟೆ ಸಂಪರ್ಕದ ರಾಜ್ಯ ಹೆದ್ದಾರಿಯಲ್ಲಿ ನಮ್ಮ ಗ್ರಾಮ ಪಂಚಾಯಿತಿ ಮಾರ್ಗವಾಗಿ ಸಾಗುವ ಕಬ್ಬಿಣ ಸೇತುವೆಯನ್ನು ಆಧುನಿಕ ತಂತ್ರಜ್ಞಾನದಲ್ಲಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕರಾದ ಡಾ. ಮಂತರ್ ಗೌಡರವರ ಮುತುವರ್ಜಿಯಿಂದ ಹಸಿರು ನಿಶಾನೆ ದೊರೆತ್ತಿದ್ದು, ಸರಿ ಸುಮಾರು10 ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿಯು ಶೀಘ್ರದಲ್ಲೇ ಚಾಲನೆಗೊಳ್ಳಲಿದೆ.
ಒಟ್ಟಿನಲ್ಲಿ ನಮ್ಮ ಗ್ರಾಮದ ಸರ್ವಾಂಗಿಣ ಅಭಿವೃದ್ದಿಯತ್ತ ನನ್ನ ಪ್ರಯತ್ನ ಸಾಗಿದೆ. ನನ್ನ ಈ ಎಲ್ಲಾ ಕಾರ್ಯಗಳಿಗೆ ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು ಹಾಗೂ ಗ್ರಾಮಸ್ಥರ ಸಹಕಾರವು ಉತ್ತಮವಾಗಿ ದೊರಕುತ್ತಿದೆ”
ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ವಿನೋದ್ .ಜಿ.ಕೆ ರವರು ರಾಜಕೀಯ ಕ್ಷೇತ್ರದಲ್ಲಿ ಬಿ.ಜೆ.ಪಿ. ಪಕ್ಷದ ಬೂತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದಾರೆ.
ಸಾಮಾಜಿಕ ಕ್ಷೇತ್ರದಲ್ಲಿ ಸೋಮವಾರಪೇಟೆ ಆಟೋ ಚಾಲಕರ ಸಂಘದ ಸದಸ್ಯರಾಗಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿ ಐಗೂರು ಮುತ್ತಪ್ಪ ದೇವಾಲಯ ಹಾಗೂ ಕಾಜೂರು ಅಯ್ಯಪ್ಪ ದೇವಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಐಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ ಸದಸ್ಯರಾಗಿದ್ದಾರೆ.
ವಿನೋದ್ .ಜಿ.ಕೆ ರವರ ಕುಟುಂಬ ಪರಿಚಯ:
ವಿನೋದ್ .ಜಿ.ಕೆ ರವರ ತಂದೆ: ಕೃಷ್ಣಕುಟ್ಟಿ. ತಾಯಿ : ಮುತ್ತು. ಪತ್ನಿ: ಶಿಲ್ಪಾ, ಗೃಹಿಣಿಯಾಗಿದ್ದಾರೆ. ಮಗಳು: ಧೃತಿ ಮಗ: ನಿಹಾಲ್ ವ್ಯಾಸಾಂಗ ನಿರತರಾಗಿದ್ದಾರೆ.
ವಿನೋದ್ .ಜಿ.ಕೆ ರವರು ಪ್ರಸ್ತುತ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಾಜೂರು ಗ್ರಾಮದಲ್ಲಿ ಕುಟುಂಬ ಸಮೇತ ನೆಲೆಸಿದ್ದಾರೆ. ಇವರ ರಾಜಕೀಯ, ಸಹಕಾರ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಯು ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು “ಸರ್ಚ್ ಕೂರ್ಗ್ ಮೀಡಿಯಾ” ವು ಹಾರೈಸುತ್ತದೆ.
ಸಂದರ್ಶನ ದಿನಾಂಕ: 11-05-2024