193 ಕೋಟಿ ವಾರ್ಷಿಕ ವ್ಯವಹಾರ ನಡೆಸಿದ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

Reading Time: 2 minutes

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 7ನೇ ವಾರ್ಷಿಕ ಮಹಾಸಭೆ
193 ಕೋಟಿ ವಾರ್ಷಿಕ ವ್ಯವಹಾರ
38.47 ಲಕ್ಷ ಲಾಭ
ರಬ್ಬರ್ ವ್ಯವಹಾರ ಮಾಡಿದ ಸದಸ್ಯರಿಗೆ ಕೆ.ಜಿ.ಗೆ ರೂ 2ರಂತೆ ಪ್ರೋತ್ಸಾಹ ಧನ
ಸದಸ್ಯರಿಗೆ ಶೇ 8 ಡಿವಿಡೆಂಡ್

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 7ನೇ ವಾರ್ಷಿಕ ಮಹಾಸಭೆಯು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಸೆಪ್ಟೆಂಬರ್ 17ರಂದು ನಡೆಯಿತು. ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳ ಪ್ರಾರ್ಥನೆಯಿಂದ ಸಭೆ ಪ್ರಾರಂಭವಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಎಚ್ ಕೆ ಇವರು ಸರ್ವರನ್ನು ಸ್ವಾಗತಿಸಿ, ವರದಿ ಮಂಡಿಸಿದರು.

ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಸಹಕಾರ ಸಂಘವು ವರದಿ ವರ್ಷದಲ್ಲಿ 193 ಕೋಟಿ ವಾರ್ಷಿಕ ವ್ಯವಹಾರವನ್ನು ನಡೆಸಿ 38.47 ಲಕ್ಷ ಲಾಭಗಳಿಸಿದೆ. ವಿಶೇಷವಾಗಿ ರಬ್ಬರ್ ವ್ಯವಹಾರ ಮಾಡಿದ ಸದಸ್ಯರುಗಳಿಗೆ ಕೆ.ಜಿಗೆ ರೂ 2 ರಂತೆ ಪ್ರೋತ್ಸಾಹ ಧನವನ್ನು ನೀಡಲು 5.95 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ. ಸದಸ್ಯರಿಗೆ ಶೇ. 8 ರಂತೆ ಡಿವಿಡೆಂಡ್ ಘೋಷಿಸಲಾಗಿದೆ ಎಂದು ಮಾತನಾಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಅಶೋಕ ಪಿ ಎಂ, ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ ಬಿ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳ ಬಂಗಾರಕೋಡಿ, ಪುಷ್ಪಾವತಿ ವ್ಯಾಪಾರೆ, ಪ್ರದೀಪ ಕೆ.ಎಂ, ದೀನರಾಜ್ ದೊಡ್ಡಡ್ಕ, ಶೇಷಪ್ಪ ನಾಯ್ಕ ನಿಡ್ಯಮಲೆ, ಜಯರಾಮ ಪಿ. ಟಿ, ಕಿರಣ್ ಬಂಗಾರಕೋಡಿ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಶ್ರೀನಿವಾಸ್ ಕೆ ಜಿ ಇವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿ ಅವರು ಸರ್ವರಿಗೂ ವಂದನಾರ್ಪಣೆಗೈದರು.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments