ಹೈಪ್ಲೈಯರ್ಸ್ ತಂಡದ ಸಾರಥ್ಯದಲ್ಲಿ ಡಿ. 4ರಿಂದ ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಾವಳಿ

Reading Time: 3 minutes

ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-, 2024ಅನ್ನು ಡಿ.4ರಿಂದ 8ರವರೆಗೆ ಆಯೋಜಿಸಲಾಗಿದೆ ಎಂದು ಹೈಪ್ಲೈಯರ್ಸ್ ತಂಡದ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ ಅವರು ತಿಳಿಸಿದ್ದಾರೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಈ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೌಟುಂಬಿಕ ಹಾಕಿ ಪಂದ್ಯಾವಳಿಯು ವಿ. ಬಾಡಗ ಗ್ರಾಮದಲ್ಲಿ 3ನೇ ಬಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿರುವುದಾಗಿ ರಂಜು ಪೂಣಚ್ಚ ಮಾಹಿತಿ ನೀಡಿದರು.

ಕುಟುಂಬ ತಂಡಗಳಲ್ಲಿ ಗರಿಷ್ಠ 4 ಅತಿಥಿ ಆಟಗಾರರು ಭಾಗವಹಿಸಬಹುದಾಗಿದೆ. ಆದರೆ ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿರುವ ರಂಜು ಪೂಣಚ್ಚ, ಕ್ರೀಡಾ ಪ್ರೇಮಿಗಳ ಆರ್ಥಿಕ ನೆರವಿನಿಂದ ಕಳೆದ ಎರಡು ವರ್ಷ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಸಂಪೂರ್ಣವಾಗಿ ದಾನಿಗಳ ನೆರವಿನಿಂದಲೇ ಪಂದ್ಯಾವಳಿ ಜರುಗಲಿದ್ದು, ಗ್ರಾಮಸ್ಥರು ಮತ್ತು ಪ್ರಾಯೋಜಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹಾಕಿ ಪಂದ್ಯಾವಳಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈ ಕಾರಣಕ್ಕಾಗಿ ಹೈ ಫ್ಲೈಯರ್ಸ್ ಎಂಬ ಕ್ರೀಡಾ ಸಂಸ್ಥೆಯನ್ನು ಕಳೆದ ಎರಡು ವರ್ಷಗಳ ಹಿಂದೆ ಹುಟ್ಟು ಹಾಕಲಾಗಿದೆ ಎಂದು ವಿವರಿಸಿರುವ ರಂಜು ಪೂಣಚ್ಚ, ಹಾಕಿ ಕೂರ್ಗ್ ಸಂಸ್ಥೆಯ ಅಧೀನದಲ್ಲಿ ನಡೆಯಲಿರುವ ಈ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಆಸಕ್ತ ಕುಟುಂಬ ತಂಡಗಳು ಪಂದ್ಯಾವಳಿಗೆ ಹೆಸರು ನೋಂದಾಯಿಸಲು ನವೆಂಬರ್ 20 ಕೊನೆಯ ದಿನವಾಗಿರುತ್ತದೆ. ಪಂದ್ಯಾವಳಿಯ ಕುರಿತ ಹೆಚ್ಚಿನ ಮಾಹಿತಿಗಾಗಿ 9481883738/ 9448306340 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕ್ರೀಡಾ ಕಾರ್ಯದರ್ಶಿಗಳಾದ ಕುಪ್ಪಂಡ ದಿಲನ್ ಬೋಪಣ್ಣ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಹಾಕಿ ಪಂದ್ಯಾವಳಿಯನ್ನು ನಿರಂತರವಾಗಿ ಆಯೋಜಿಸುವುದರಿಂದ ಹಾಕಿ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆತಂತಾಗುತ್ತದೆ. ಗ್ರಾಮೀಣ ಮಟ್ಟದ ಕ್ರೀಡಾಕೂಟಗಳಿಂದ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಂತಾಗುತ್ತದೆ. ಕಳೆದ ಬಾರಿ ಆಯೋಜಿಸಿದ್ದ ಈ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 19 ಕುಟುಂಬ ತಂಡಗಳು ಭಾಗವಹಿಸಿದ್ದವು. ಈ ಬಾರಿ 25 ತಂಡಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಸಂಸ್ಥೆಯ ಸಲಹಾ ಸಮಿತಿ ನಿರ್ದೇಶಕರಾದ ಕೊಂಗಂಡ ಕಾಶಿ ಕಾರ್ಯಪ್ಪ, ಉಪಾಧ್ಯಕ್ಷರಾದ ಕಂಜಿತಂಡ ವಿಕ್ರಾಂತ್ ಮತ್ತು ಸ್ವಾಗತ ಸಮಿತಿ ಸಂಚಾಲಕರಾದ ಚೇಮಿರ ಪ್ರಭು ಪೂವಯ್ಯ ಉಪಸ್ಥಿತರಿದ್ದರು.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments