ಕೊಡಗಿನ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿರುವ ಶ್ರೀ ಬೆಟ್ಟಚಿಕ್ಕಮ್ಮ ದೇವಾಲಯದ ದೇವರ ವಾರ್ಷಿಕ ಉತ್ಸವವು ನವೆಂಬರ್ 1ರಿಂದ 6ರವರಗೆ ವಿಜ್ರಂಭಣೆಯಿಂದ ನಡೆಯಲಿದೆ.
ಶುಕ್ರವಾರದಿಂದ ಪ್ರತೀ ದಿನ ಸಂಜೆ ದೇವಿಗೆ ವಿಶೇಷ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ದಿನಾಂಕ: 05-11-2024 ರ ಮಂಗಳವಾರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರಗೆ ದೇವರ ಅವಭ್ರತ ಸ್ನಾನ, ನೃತ್ಯ ಪ್ರದಕ್ಷಿಣೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜಾತ್ರೆಯು ವಿಜೃಂಭಣೆಯಿಂದ ಜರುಗುತ್ತದೆ. 06-11-2024 ರ ಬುಧವಾರ ಬೆಳ್ಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರಗೆ ದೇವಿಯ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ.
ಭಕ್ತಾಧಿಗಳು ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೇವರ ತೀರ್ಥ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಬೆಟ್ಟಚಿಕ್ಕಮ್ಮ ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿ ಕೊಂಡಿದೆ. ಹೆಚ್ಚಿನ ಮಾಹಿತಿಗಾಗಿ: ಅರ್ಚಕರು: ಲೋಕೇಶ್ ಪಿ.ವಿ. ಮೊ: 9480787874 ಸಂಪರ್ಕಿಸಲು ಕೋರಿದೆ.