ಮೂರ್ನಾಡುವಿನಲ್ಲಿ ವಿಜೃಂಭಣೆಯಿಂದ ಜರುಗಿದ ಓಣಂ ಆಚರಣೆ

Reading Time: 4 minutes

ಮೂರ್ನಾಡು: ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 16ನೇ ವರ್ಷದ ಓಣಂ ಆಚರಣೆಯು ಅತ್ಯಂತ ವಿಜೃಂಭಣೆಯಿ0 ಜರುಗಿತು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಆಚರಣೆಯ ಸಮಾರಂಭವನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಮ್ಮ ಆಚಾರವಿಚಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು. ಆಗಷ್ಟೆ ದೇಶ ದೇಶವಾಗಿ ಉಳಿಯಲು ಸಾಧ್ಯ ಎಂದರು. ಇಡೀ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನ ಇಂತಹ ಸಂಘಟನೆಗಳಿ ಆಗುತ್ತಿದೆ. ಸಮಾಜ ಒಳ್ಳೆಯದಾದರೆ ನಾಡು ಸುಭದ್ರವಾಗುತ್ತದೆ. ಮೂಲಕ ದೇಶದ ಏಕತೆ ಅಖಂಡತೆಗೆ ಕಾರಣವಾಗುತ್ತದೆ ಎಂದು ಹೇಳಿದರು.

ಮತ್ತೋರ್ವ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ ಹಿಂದೂ ಸಮಾಜದವರು ತಮ್ಮ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿದಾಗ ಮಾತ್ರ ಹಿಂದೂ ಸಮಾಜ ಗಟ್ಟಿಗೊಳ್ಳುತ್ತದೆ. ಹೀಗೆ ತಮ್ಮ ಆಚಾರವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊoಡಾಗ ದೇಶವು ಸಹ ಅಭಿವೃದ್ಧಿ ಹೊಂದುತ್ತದೆ. ಸಮಾಜವನ್ನು ಕಟ್ಟುವುದೊಂದಿಗೆ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಒಗ್ಗಟ್ಟನ್ನು ಪ್ರದರ್ಶಿಸಿ ಆರ್ಥಿಕವಾಗಿ ಸಬಲರಾಗುವಂತೆ ಪ್ರಯತ್ನಶೀಲರಾಗಬೇಕು ಎಂದರು.

ಹಿoದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ಕೆ. ಶಶಿಕುಮಾರ್, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಡ್ವೈಜರಿ ಕಮಿಟಿ ಚೇರ್ಮನ್ ವಾಸುದೇವನ್, ವಿರಾಜಪೇಟೆ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ವಿನುತ್ಒಂಟಿಯoಗಡಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ನಂದಕುಮಾರ್, ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್, ಸೋಮವಾರಪೇಟೆ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಪ್ರಕಾಶ್, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಪಿ. ರವೀಂದ್ರನ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.. ಹಂಸ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್, ಮೂರ್ನಾಡು ಹಿಂದೂ ಮಲಯಾಳಿ ಸಂಘದ ಪ್ರದಾನ ಕಾರ್ಯದರ್ಶಿ ಟಿ. ಸಂತೋಷ್ ಕುಮಾರ್, ಉಪಾಧ್ಯಕ್ಷ ಕೆ.. ಸುಬ್ರಮಣಿ, ಖಜಾಂಚಿ ಎನ್.ಕೆ. ಮುರಳಿ ಉಪಸ್ಥಿತರಿದ್ದರು.

ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂದರ್ಭದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ಬಲಮುರಿಯಲ್ಲಿ ಇತ್ತೀಚಿಗೆ ನದಿಗೆ ಬಿದ್ದ ವ್ಯಕ್ತಿಯನ್ನು ಸಂರಕ್ಷಿಸಿದ ಈಜುಗಾರ ಹಾಗೂ ಸಂಘದ ಸದಸ್ಯ ಎಂ.ಆರ್. ಬಿಪಿನ್ ಅವರನ್ನು ಸಂಘದವತಿಯಿo ಸನ್ಮಾನಿಸಲಾಯಿತು. ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ಮೂರ್ನಾಡಿನ ಕಿಶೋರ್ ಚಿನ್ನ ಪ್ರಥಮ ಸ್ಥಾನ ಗಳಿಸಿದರು. ದ್ವಿತೀಯ ಸ್ಥಾನವನ್ನು ಕಬಡಕೇರಿಯ ಜಿತಿನ್ ಹಾಗೂ ತೃತೀಯ ಬಹುಮಾನವನ್ನು ಪಾಲೆಮಾಡಿನ ಸುನೀತ ರಾಜನ್ ಪಡೆದುಕೊಂಡರು. ವಿಜೇತರಿಗೆ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಯಿತು

ಸಮಾರಂಭಕ್ಕೂ ಮುಂಚೆ ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ಕೇರಳದ ಸಾಂಪ್ರಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚೆಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು, ಶ್ರೀಕೃಷ್ಣ ವೇಷಧಾರಿಗಳು ಪಾಲ್ಗೊಂಡು ನೋಡುಗರ ಗಮನ ಸೆಳೆದರು. ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿದರು.

ಓಣಂ ಭಕ್ಷಯ ಭೋಜನದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸಿಮ್ಲಾ ಗೋಪಿ, ಸುಜಾತ ಗೋಪಿ ಪ್ರಾರ್ಥಿಸಿದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್ ಸ್ವಾಗತಿಸಿ, ಸಜೀವ ಕಾರ್ಯಕ್ರಮ ನಿರೂಪಿಸಿ, ಟಿ. ಸಂತೋಷ್ ಕುಮಾರ್ ವಂದಿಸಿದರು.

ಚಿತ್ರ ಮತ್ತು ವರದಿ: ಟಿ.ಸಿ. ನಾಗರಾಜ್, ಮೂರ್ನಾಡು

 

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments