Reading Time: 2 minutes
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/Ln5WiyAJxApLbTxD0ttgcU ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ, ಜೇಡ್ಲ ಗೋಶಾಲೆಯಿಂದ ಪ್ರಥಮ ವರ್ಷದ “ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನ.
ಶ್ರೀ ರಾಮಚಂದ್ರಾಪುರ ಮಠ, ಹೊಸನಗರದ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ, ಜೇಡ್ಲ, ಸಂಪಾಜೆ ಗೋಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ: 07-12-2024 ರಂದು ಆಯ್ದ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 5 ದೇಶೀ ಗೋ ಪಾಲಕರಿಗೆ “ಜೇಡ್ಲ ಗೋಕುಲ ತಿಲಕ-24” ಎಂಬ ಬಿರುದಿನೊಂದಿಗೆ ಪ್ರೋತ್ಸಾಹ ಧನ ಹಾಗೂ ಪ್ರಶಂಸನಾ ಪತ್ರ ನೀಡಲಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅರ್ಹ ದೇಶೀ ಗೋ ಪಾಲಕರು 22-11-24 ರ ಮೊದಲು ಅರ್ಜಿಯನ್ನು ಸಲ್ಲಿಸಲು ಪ್ರಕಟಣೆ ತಿಳಿಸಿದೆ. ವಿವರಗಳಿಗಾಗಿ:9886266120 ಅಥವಾ 9481979526 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.