ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮದಿನ ಆಚರಣೆ

Reading Time: 2 minutes

ಮಡಿಕೇರಿ ಜ.23: ಕ್ರಾಂತಿಕಾರಿ ಆಲೋಚನೆಗಳ ಮೂಲಕ ಭಾರತದ ಸ್ವಾತಂತ್ರ್ಯ ಚಳವಳಿಯನ್ನು ಮುನ್ನಡೆಸಿದ್ದ ಅಪ್ರತಿಮ ದೇಶಪ್ರೇಮಿ, ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಇಡೀ ಬದುಕನ್ನೇ ಸವೆಸಿದ ನೇತಾಜಿ ಸುಭಾಷ್ ಚಂದ್ರ ಬೋಸ್‌ರ ದೇಶಪ್ರೇಮ ಮತ್ತು ಸಮರ್ಪಣಾಭಾವವನ್ನು ಅವರ ಜನ್ಮದಿನದಂದು ಸ್ಮರಿಸಬೇಕಿದೆ ಎಂದು ಬಿ.ಜೆ.ಪಿ. ಎಸ್.ಸಿ. ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷರಾದ ಪಿ.ಎಂ. ರವಿಯವರು ನುಡಿದರು.

ಇಂದು ಜನವರಿ 23 “ಪರಾಕ್ರಮ್ ದಿವಸ್‌” ಅಂಗವಾಗಿ ಮಡಿಕೇರಿ ನಗರದ ವಾರ್ಡ್ ನಂ.6 ರ ಸ್ಥಳೀಯ ರಾಘವೇಂದ್ರ ದೇವಾಲಯದ “ನೇತಾಜಿ ಜಂಕ್ಷನ್‌” ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಪಿ.ಎಂ.ರವಿಯವರು,  ‘ನನಗೆ ನೀವು ರಕ್ತವನ್ನು ನೀಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ’ ಎಂಬ ಸಂದೇಶದ ಮೂಲಕ ಕೋಟಿ ಕೋಟಿ ಭಾರತೀಯರನ್ನು ಒಂದುಗೂಡಿಸಿದ ಮಹಾನ್ ಚೇತನ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಅವರಿಗೆ ನಮ್ಮೇಲ್ಲರ ನಮನವನ್ನು ಸಲ್ಲಿಸಿ, ಸ್ವಾತಂತ್ರ ಹೋರಾಟಕ್ಕಾಗಿ ಮಾಡಿದ ತ್ಯಾಗವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ ಎಂದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವಾದ ಇಂದು ಅವರಿಗೆ ಕೃತಜ್ಞತೆಯಿಂದ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಉದ್ಯಮಿ ಹರೀಶ್‌ ರೈ, ಜನನಿ ಮಹಿಳಾ ಮಂಡಳಿ(ರಿ) ಇದರ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರುಗಳು, ಸದಸ್ಯರು, ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments