ಶ್ರೀ ಮುತ್ತಪ್ಪನ್ ಕ್ಷೇತ್ರಂ , ಮಡಿಕೇರಿ
Sri Muthappan Kshethram, Madikeri – Kodagu
ಏಪ್ರಿಲ್ 8 ರಂದು ಮಡಿಕೇರಿ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ
ಪ್ರಾಸ್ತಾವಿಕ
ಸುಮಾರು 160 ವರ್ಷಗಳ ಇತಿಹಾಸ ಹೊಂದಿರುವ ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೇವಾಲಯ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆಯನ್ನು ದಿನಾಂಕ 6-4-2022 ರಿಂದ 9-4-2022ರ ವರೆಗೆ 4 ದಿನಗಳ ಕಾಲ ವಿಜೃಂಭಣೆಯಿAದ ನಡೆಸಲು ಸಮಿತಿ ನಿರ್ಧರಿಸಿದೆ. ಆ ಪ್ರಕಾರ ದಿನಾಂಕ 6-4-2022 ರಂದು ಸಂಜೆ 6-30 ಗಂಟೆಯಿAದ ದೇವಾಲಯದ ತಂತ್ರಿಗಳಾದ ಕೇರಳದ ಪಯ್ಯನ್ನೂರಿನ ಬ್ರಹ್ಮಶ್ರೀ ಕುನ್ನತ್ತಿಲ್ಲತ್ತ್ ಮುರಳಿಕೃಷ್ಣನ್ ನಂಬೂದರಿ ತಂತ್ರಿಗಳ ನೇತೃತ್ವದಲ್ಲಿ ಸಂಜೆ 6-30 ರಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ವಾಸ್ತು ಬಲಿ, ವಾಸ್ತು ಪುಣ್ಯಾಹ, ಮಹಾ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆಯಲಿದೆ.
ದಿನಾಂಕ 7-4-2022 ಗುರುವಾರ ಬೆಳಿಗ್ಗೆ 7-00 ರಿಂದ 108 ತೆಂಗಿನ ಕಾಯಿಗಳ ಮಹಾ ಗಣಪತಿ ಹೋಮ, ಶ್ರೀ ಅಯ್ಯಪ್ಪ, ಶ್ರೀ ಸುಬ್ರಹ್ಮಣ್ಯ, ಶ್ರೀ ಪಾರ್ವತಿ ದೇವಿಗೆ ಅಷ್ಠಾಭಿಷೇಕ, ಕಲಶಪೂಜೆ, ಕಲಶಾಭಿಷೇಕ, ಶ್ರೀ ನಾಗ ದೇವರಿಗೆ ತಂಬೀಲ ಸಮರ್ಪಣೆ ಮತ್ತು ಮಹಾಪೂಜೆಯೊಂದಿಗೆ ಅನ್ನಸಂತರ್ಪಣಾ ಕಾರ್ಯ ನಡೆಯಲಿದೆ.
ಇದೇ ದಿನ ಸಂಜೆ 4-00 ಗಂಟೆಗೆ ಕರ್ನಾಟಕ ವಿಧಾನ ಪರಿಷತ್ ಮಾಜಿ ಶಾಸಕರಾದ ಶ್ರೀ ಸುನಿಲ್ ಸುಬ್ರಮಣ , ನಗರಸಭಾ ಅಧ್ಯಕ್ಷರಾದ ಶ್ರೀಮತಿ ಅನಿತಾ ಪೂವಯ್ಯ, ಮಡಿಕೇರಿಯ ಹಿರಿಯ ವೈದ್ಯರಾದ ಡಾ|| ಎಂ.ಜಿ. ಪಾಟ್ಕರ್ ಇವರ ಸಮ್ಮುಖದಲ್ಲಿ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಶ್ರೀ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ಇವರು ಧ್ವಜಾರೋಹಣ ಮಾಡುವುದರ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ದಿನಾಂಕ 8-4-2022 ಶುಕ್ರವಾರ ಸಂಜೆ 5-00 ಗಂಟೆಗೆ ಶ್ರೀ ಮುತ್ತಪ್ಪ ದೇವರ ಕಲಶ ಮೆರವಣ ಗೆಯು ಗಾಂಧಿ ಮೈದಾನದಿಂದ ಹೊರಡಲಿದೆ. ಮೆರವಣ ಗೆಯಲ್ಲಿ ಕಡಗದಾಳು, ನೀರುಕೊಲ್ಲಿ, ಸಂಪಿಗೆ ಕಟ್ಟೆ, ಕೆ.ಎಸ್.ಆರ್.ಟಿ.ಸಿ. ಡಿಪೋ ಮುಂಭಾಗ, ಕಾಲೇಜು ರಸ್ತೆಯ ಮೈತ್ರಿ ಜಂಕ್ಷನ್ ಹೀಗೆ ನಗರದ ನಾಲ್ಕೂ ದಿಕ್ಕುಗಳಿಂದ ಬರುವ ಶ್ರೀ ಮುತ್ತಪ್ಪ ದೇವರ ಕಲಶದೊಂದಿಗೆ ಮಹಿಳೆಯರು ಮತ್ತು ಮಕ್ಕಳ ತಾಲಾಪೊಲಿ ಮೆರವಣ ಗೆಯನ್ನು ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀಮತಿ ವೀಣಾ ಅಚ್ಚಯ್ಯರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಿದ್ದಾರೆ. ಮಂಗಳೂರಿನ ಆಕರ್ಷಕ ಚಂಡೆ ವಾದ್ಯ ಹಾಗು ಪಾಲಕ್ಕಾಡಿನ ಆಕರ್ಷಕ ಕಲಾತಂಡಗಳು ಮೆರವಣ ಗೆಗೆ ಮೆರಗು ನೀಡಲಿದೆ.
.
ಇದೇ ದಿನ ದೇವಾಲಯದ ಆವರಣದಲ್ಲಿ ಸಂಜೆ 4-00 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು.
4-30 ಗಂಟೆಗೆ ಶ್ರೀ ಶಾಸ್ತಪ್ಪ ದೇವರ ವೆಳ್ಳಾಟಂ
5-30 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ
ರಾತ್ರಿ 7-00 ಗಂಟೆಗೆ ಶ್ರೀ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿ ಸ್ಪರ್ಶ, 8-30 ಗಂಟೆಗೆ ಶ್ರೀ ಪೋದಿ ವೆಳ್ಳಾಟಂ
9-30 ಗಂಟೆಗೆ ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ,
9-30 ರಿಂದ 1-30 ರವರೆಗೆ ‘ಮಂಗಳೂರಿನ ಸೌರಭ ಕಲಾ ಪರಿಷತ್ ಹಾಗೂ ಕೊಡಗಿನ ಪ್ರತಿಷ್ಠಿತ ನೃತ್ಯ ಕಲಾ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ.ಜಿ. ಬೋಪಯ್ಯ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ ಎಂ.ಪಿ. ಸುಜಾ ಕುಶಾಲಪ್ಪ ಇವರು ದೀಪ ಜ್ವಲನೆ ಮಾಡುವ ಮೂಲಕ ಉದ್ಘಾಟಿಸಲಿದ್ದಾರೆ.
ರಾತ್ರಿ 12-00 ಗಂಟೆಗೆ ಶ್ರೀ ಶಿವಭೂತ ತೆರೆ
1-00 ಗಂಟೆಗೆ ಶ್ರೀ ಗುಳಿಗ ದೇವರ ತೆರೆ
2-30 ಗಂಟೆಗೆ ಶ್ರೀ ಕುಟ್ಟಿಚಾತನ್ ದೇವರ ತೆರೆ
3-00 ಗಂಟೆಗೆ ಕಳಗ ಪಾಟ್, ಸಂದ್ಯಾವೇಲೆ
.
9-4-2022 ಶನಿವಾರ ಬೆಳಿಗ್ಗೆ 4-00 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ
ಬೆಳಿಗ್ಗೆ 5-00 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಮೇಲೇರಿ, 8-00 ಗಂಟೆಗೆ ಶ್ರೀ ಪೊವ್ವದಿ ತೆರೆ, 9-30 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಬಾರಣೆ, ಮಧ್ಯಾಹ್ನ 11-30 ಕ್ಕೆ ಧ್ವಜ ಅವರೋಹಣ.
.
ಪ್ರತಿ ವರ್ಷದಂತೆ ಈ ವರ್ಷವೂ ವಿಜ್ರಂಭಣೆಯಿAದ ನಡೆಯುವ ಈ ಸಾಂಪ್ರದಾಯಿಕ ಮೆರವಣ ಗೆಗೆ ಜಾತಿ ಭೇದವಿಲ್ಲದೆ ಪ್ರತಿ ಮನೆಯಿಂದಲೂ ಮಹಿಳೆಯರು ಮತ್ತು ಮಕ್ಕಳು ತಾಲಾಪೊಲಿ (ದೀಪ) ಮತ್ತು ಪೂರ್ಣಕುಂಭ ಕಲಶದೊಂದಿಗೆ ಶ್ರೀ ಮುತ್ತಪ್ಪ ದೇವರ ಉತ್ಸವ ಕಲಶವನ್ನು ನಗರಪ್ರದಕ್ಷಿಣೆ ಮಾಡುವುದರ ಮೂಲಕ ದೇವಾಲಯಕ್ಕೆ ಬರಮಾಡಿಕೊಂಡು ಎಲ್ಲಾ ದೇವತಾಕಾರ್ಯಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಮುತ್ತಪ್ಪ ದೇವಾಲಯ ಸಮಿತಿಯು ವಿನಂತಿಸಿಕೊಳ್ಳುತ್ತದೆ.
ಟಿ.ಕೆ. ಸುಧೀರ್, ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷರು
ಶಾರದಾ ರಾಮನ್, ಶ್ರೀ ಮುತ್ತಪ್ಪ ಮಹಿಳಾ ವೇದಿಕೆ ಅಧ್ಯಕ್ಷರು
ಕೆ.ವಿ. ಸುಬ್ರಮಣ , ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ
ಕೆ.ಎಸ್. ರಮೇಶ್, ತೆಯ್ಯಂ ಸಮಿತಿ ಸಂಚಾಲಕರು
ಅಂಬೆಕಲ್ ನವೀನ್ ಕುಶಾಲಪ್ಪ, ಮೆರವಣ ಗೆ ಸಮಿತಿ ಸಂಚಾಲಕರು
ರಾಣ ನೀಲಮ್ಮ, ಸ್ವಾಗತ ಸಮಿತಿ ಸಹ ಸಂಚಾಲಕರು
ಸಂದರ್ಶನ: