ಇಂದು ವಿಶ್ವ ಪ್ರವಾಸೋದ್ಯಮ ದಿನ
ಪರಿಸರ ಪೂರಕ ಪ್ರವಾಸೋದ್ಯಮ ನಮ್ಮ ಇಂದಿನ ಧ್ಯೇಯವಾಗಲಿ
ಇಂದು ವಿಶ್ವ ಪ್ರವಾಸೋದ್ಯಮ
ದಿನ, ಪ್ರವಾಸ ಎಂದರೆ ಎಲ್ಲರಿಗೂ ಇಷ್ಟ ಕಾರಣ ಅದು ಹಲವು ವೈವಿದ್ಯತೆಗಳ ಪರಿಚಯ ಮತ್ತು ವಿಭಿನ್ನ ಅನುಭವಗಳನ್ನು ನೀಡುತ್ತದೆ. ಮೈಮನಸ್ಸನ್ನು ಉಲ್ಲಾಸಗೊಳಿಸುವಲ್ಲಿ ಪ್ರವಾಸದ ಪಾತ್ರ ದೊಡ್ಡದು.
ದೇಶ ಸುತ್ತು-ಕೋಶ ಓದು ಎನ್ನುವ ಮಾತನ್ನು ಈ ದಿನ ಸದಾ ನೆನಪಿಸುತ್ತಲೇ ಇರುತ್ತದೆ. ಏಕೆಂದರೆ ಒಂದು ಪ್ರವಾಸದಲ್ಲಿ ಸಿಗುವ ಅನುಭವ ಪುಸ್ತಕ ಓದುವುದಕ್ಕಿಂತಲು ಹೆಚ್ಚಿನದು ಎಂದರೆ ತಪ್ಪಾಗಲಾರುದು.
ವ್ರತ್ತಿಪರ ಪ್ರವಾಸೋದ್ಯಮಿಗಳನ್ನು ಸೃಷ್ಟಿಸುತ್ತಿರುವ ಪ್ರವಾಸೋದ್ಯಮ ಕೋರ್ಸ್
ಇಂದು ಪ್ರವಾಸ ಉದ್ಯಮವಾಗಿ ಪ್ರವಾಸೋದ್ಯಮವಾಗಿದೆ, ಕಾರಣ ಅದರಲ್ಲಿನ ಅನೇಕ ಅನುಕೂಲಗಳು. ಇಂದು ಭಾರತದಲ್ಲಿ ಪ್ರವಾಸೋದ್ಯಮವು ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದೆ.
ಪ್ರವಾಸ ಎಂದರೆ ಅದು ಕೇವಲ ಸುತ್ತಾಟವಲ್ಲ. ಅಲ್ಲಿ ಒಂದು ಕಲಿಕೆ ಇರುತ್ತದೆ. ಕೃಷಿ ಪ್ರವಾಸೋದ್ಯಮ, ಅಡುಗೆ ಪ್ರವಾಸೋದ್ಯಮ, ಸಾಂಸ್ಕೃತಿಕ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಪರಂಪರೆಯ ಪ್ರವಾಸೋದ್ಯಮ, ವೈದ್ಯಕೀಯ ಪ್ರವಾಸೋದ್ಯಮ, ನೌಕಾಯಾನ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವನ್ಯಜೀವಿ ಪ್ರವಾಸೋದ್ಯಮ ಹೀಗೆ ಹಲವು ಬಗೆಯ ಪ್ರವಾಸಗಳಿವೆ.
ಪ್ರವಾಸೋದ್ಯಮದಿಂದ ಸಾರಿಗೆ, ಹೊಟೇಲ್ ಉದ್ಯಮಕ್ಕೆ ನೇರ ಲಾಭ ತರುವುದರಿಂದ ಅಲ್ಲಿ ಹೆಚ್ಚು ಉದ್ಯೋಗವಕಾಶಗಳು ಸೃಷ್ಟಿಯಾಗುತ್ತದೆ. ಅಲ್ಲದೇ ದೇಶಕ್ಕೆ ಆರ್ಥಿಕ ಲಾಭವನ್ನು ಉಂಟು ಮಾಡುತ್ತದೆ.
ಪ್ರವಾಸೋದ್ಯಮ ದಿನದ
1997 ರಿಂದ ಅಚರಣೆಯಲ್ಲಿರುವ ಈ ದಿನವನ್ನು ವಿಶ್ವಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO) 1980ರಲ್ಲಿ ಸೆಪ್ಟಂಬರ್ 27ನ್ನು ವಿಶ್ವ ಪ್ರವಾಸೋದ್ಯಮ ದಿನವನ್ನಾಗಿ ಘೋಷಣೆ ಮಾಡಿತು.
ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ವೃದ್ಧಿಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟಂಬರ್ 27ರಂದು ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲಾಗುತ್ತಿದೆ.
ಭಾರತದಲ್ಲಿ ಪ್ರವಾಸೋದ್ಯಮ ಸ್ಥಿತಿ
ಭಾರತಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಭಾರತದ ಸಂಸ್ಕೃತಿಗೆ ಮಾರುಹೋಗಿರುವ ವಿದೇಶಿಗರು ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹಾಗೆಯೇ ಭಾರತೀಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ.
ಪ್ರವಾಸೋದ್ಯಮವು ಭಾರತದಲ್ಲಿ ಅತಿ ದೊಡ್ಡ ಸೇವಾ ವಲಯವಾಗಿದೆ. ಇದು ರಾಷ್ಟ್ರೀಯ ಜಿಡಿಪಿಗೆ 6.23% ಹಾಗೂ ಭಾರತದಲ್ಲಿ ಒಟ್ಟು ಉದ್ಯೋಗಕ್ಕೆ 8.78%ರಷ್ಟು ಕೊಡುಗೆ ನೀಡುತ್ತದೆ. ವಾರ್ಷಿಕ 5 ದಶಲಕ್ಷಕ್ಕಿಂತಲೂ ಹೆಚ್ಚು ವಿದೇಶೀ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದಾರೆ. ಭಾರತದ ಪ್ರವಾಸೋದ್ಯಮ ಸೇವಾ ವಲಯವು 2008ರಲ್ಲಿ ಸುಮಾರು US$100 ಶತಕೋಟಿ ಆದಾಯ ಗಳಿಸಿತು. ವಾರ್ಷಿಕ 9.4% ಅಭಿವೃದ್ಧಿ ದರದಲ್ಲಿ, 2018ರೊಳಗೆ US$275.5 ಶತಕೋಟಿ ಆದಾಯ ತರುವ ಸಾಧ್ಯತೆಯಿದೆ.
ವಿಶ್ವ ಪರ್ಯಟನ ಮತ್ತು ಪ್ರವಾಸೋದ್ಯಮ ಸಮಿತಿ ಯ ಪ್ರಕಾರ, ಪರ್ಯಟನ ವಲಯದಲ್ಲಿ ಅತಿ ಹೆಚ್ಚು ಅಭಿವೃದ್ಧಿಯ ಸಾಮರ್ಥ್ಯ ಹೊಂದಿರುವ ಭಾರತ ಉಪಖಂಡಕ್ಕೆ ಮುಂದಿನ ಹತ್ತು ವರ್ಷಗಳ ವರೆಗೆ ಪ್ರವಾಸೋದ್ಯಮಕ್ಕೆ ಪೂರಕವಾದ ಅಗತ್ಯ ಸಾಮರ್ಥ್ಯವಿದೆ. ವಿಶ್ವದಲ್ಲೇ ಅತಿ ಜನಪ್ರಿಯ ಪ್ರವಾಸೀ ಕೇಂದ್ರಬಿಂದುವಾಗಿ ಹೊರಹೊಮ್ಮಲಿದೆ. ಭಾರತ ದರಗಳ ಸ್ಫರ್ಧೆಯಲ್ಲಿ ಆರನೆಯ ಸ್ಥಾನ ಹಾಗೂ ಸುರಕ್ಷತೆ ಹಾಗೂ ಭದ್ರತೆಯ ವಿಚಾರದಲ್ಲಿ 39ನೇಯ ಸ್ಥಾನದಲ್ಲಿದೆ.
ಕೊಡಗಿನಲ್ಲಿ ಪ್ರವಾಸೋದ್ಯಮ ಪರಿಸರಕ್ಕೆ ಪೂರಕವೋ? ಮಾರಕವೋ
ಈ ಮೇಲಿನ ಪ್ರಶ್ನೆ ನಮ್ಮಲ್ಲಿ ಈಗ ಬಂದೇ ಬರುತ್ತೆ.ಯಾಕೆಂದರೆ ಕೊಡಗು ತನ್ನ ಇತಿಹಾಸದಲ್ಲಿ ಕಂಡು ಕೇಳರಿಯದ ಪ್ರಕೃತಿ ವಿಕೋಪಕ್ಕೆ ತುತ್ತಾಗಿದೆ.
ಇದೆಕ್ಕೆಲ್ಲಾ ಕಾರಣ ಪ್ರವಾಸೋದ್ಯಮದ ಹೆಸರಿನಲ್ಲಿ ನಾವು ಪ್ರಕೃತಿಯ ಮೇಲೆ ನಿರಂತರ ಮಾಡಿರುವ ದೌರ್ಜನ್ಯ ಅಲ್ವೇ?
ವರ್ಷಕ್ಕೆ ೨೫ ಕ್ಕೂ ಹೆಚ್ಚು ಲಕ್ಷ ಜನ ಪ್ರವಾಸಿಗರು ಕೊಡಗಿನ ಸುಂದರವಾದ ರಸಮಯವಾದ ಪ್ರಕೃತಿಯ ಸೊಬಗನ್ನು ನೋಡಲು ದೇಶ- ವಿದೇಶದಿಂದ ಪುಟ್ಟ ಜಿಲ್ಲೆ ಕೊಡಗಿಗೆ ಬರುತ್ತಿದ್ದಾರೆ.
ಪ್ರವಾಸೋದ್ಯಮದ ಹೆಸರಿನಲ್ಲಿ ಸುಂದರವಾದ ಕಾಫಿ ಎಸ್ಟೇಟ್ ಗಳನ್ನು ತುಂಡು ತುಂಡಾಗಿ ಕತ್ತರಿಸಿ ಅದನ್ನು ಉತ್ತರ ಭಾರತದ ಜನರಿಗೆ ರೆಸಾರ್ಟ್ ಮಾಡಲು ಅವಕಾಶ ಕಲ್ಪಿಸಿಕೊಡುತ್ತಿದೆ.
ಮನೆಗೊಂದು ಬೋರ್ ವೆಲ್ ಕೊರೆಸಿ ಕಾಡು ಕತ್ತರಿಸಿ ಕಾಂಕ್ರೀಟ್ ಕಾಡು ಕಟ್ಟುತ್ತಿದ್ದರೂ ಯಾರೂ ಮಾತನಾಡುತ್ತಿಲ್ಲ.
ಪ್ರವಾಸೋದ್ಯಮದ ಹೆಸರಿನಲ್ಲಿ ನಮ್ಮ ಸುಂದರ ಪ್ರಕೃತಿಯನ್ನು ಬಲಿ ಪಶು ಮಾಡಬೇಕೇ?
ಪ್ರವಾಸೋದ್ಯಮದ ಹೆಸರಿನಲ್ಲಿ ನಮ್ಮ ಸುಂದರವಾದ ಪರಿಸರವನ್ನು ನಾವು ನಾಶ ಮಾಡಬೇಕೇ? ಪರಿಸರಕ್ಕೆ ಪೂರಕವಾದ ಪ್ರವಾಸೋದ್ಯಮ ನಮಗೆ ಬೇಕು,ಹೊರತು ಪರಿಸರಕ್ಕೆ ಮಾರಕವಾದ ಪ್ರವಾಸೋದ್ಯಮ ನಮಗೆ ಬೇಕಿಲ್ಲ, ಕೊಡಗಿನಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮದ ಕಡೆ ಸರ್ಕಾರ ಗಮನ ಹರಿಸಬೇಕಿದೆ..
ಅನಧಿಕೃತ ಹೋಂ ಸ್ಟೇ ಗಳಿಗೆ ಬೀಳಲಿ ಕಡಿವಾಣ
ಜಿಲ್ಲೆಯಲ್ಲಿ ಅನಧಿಕೃತ ಹೋಂ ಸ್ಟೇ ಗಳು ಕಳೆದು ಎರಡು- ಮೂರು ವರ್ಷಗಳಿಂದ ತಲೆ ಎತ್ತುತ್ತಿದೆ.ಆದರೆ ಸರ್ಕಾರ-ಜಿಲ್ಲಾಡಳಿತ ಮಾತ್ರ ನಿದ್ರಾವಸ್ಥೆಯಲ್ಲಿದೆ.
ಗುಡ್ಡ ಕಾಡುಗಳಲ್ಲಿ ದನ ಮೇಯುವ ಜಾಗ ಸೇರಿದಂತೆ ಕೃಷಿ ಭೂ ಪ್ರದೇಶವನ್ನು ಪರಿವರ್ತನೆ ( ಕನ್ ವರ್ಶನ್) ಮಾಡಿ ಲೇಔಟ್ ,ಹೋಂ ಸ್ಟೇ ಮಾಡಿ ಕೊಡಗಿಬ ಪ್ರಕೃತಿಯನ್ನು ಸರ್ವ ನಾಶ ಮಾಡಿದೆ.ನದಿ ತೀರದಲ್ಲಿ ಅಕ್ರನವಾಗಿ ಮನೆ ನಿರ್ಮಾಣ ಮಾಡಲಾಗಿದೆ.ಜಿಲ್ಲಾಡಳಿತ ಇನ್ನಾದರೂ ಕೃಷಿ ಭೂಮಿಯನ್ನು ಪರಿವರ್ತನೆಗೆ ಅವಕಾಶ ಮಾಡಿಕೊಡಬಾರದು.