ಕುಶಾಲನಗರದಲ್ಲಿ ವಿಶ್ವ ಪರಿಸರ ದಿನಾಚರಣೆ :
ಗಿಡನೆಟ್ಟು ಬೆಳೆಸುವ ಆಂದೋಲನಕ್ಕೆ ಚಾಲನೆ

ಕುಶಾಲನಗರ: ಜಿಲ್ಲಾ ಅರಣ್ಯ ಇಲಾಖೆ, ಕುಶಾಲನಗರ ಪಟ್ಟಣ ಪಂಚಾಯ್ತಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ತಾಲ್ಲೂಕು ಸಾಮಾಜಿಕ ಅರಣ್ಯ ಇಲಾಖೆ, ಕುಶಾಲನಗರ ಅರಣ್ಯ ವಲಯ ಅರಣ್ಯಾಧಿಕಾರಿಗಳ ಕಛೇರಿಯ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ತಾಲ್ಲೂಕು ಜೀವಿ ವೈವಿಧ್ಯ ನಿರ್ವಹಣಾ ಮಂಡಳಿ ಹಾಗೂ ಆದಿಶಂಕರಾಚಾರ್ಯ ಬಡಾವಣೆಯ ಹಸಿರು ಪಡೆಯ ಸಹಯೋಗದಲ್ಲಿ ಕುಶಾಲನಗರ ಪಟ್ಟಣದ ಆದಿಶಂಕರಾಚಾರ್ಯ ಮತ್ತು ಅವಧಾನಿ ಬಡಾವಣೆಯ ಮೈದಾನದ ಬಳಿ ಶುಕ್ರವಾರ ( 5 ನೇ ಜೂನ್ 2020 ) “ಮಾಲಿನ್ಯ ನಿಯಂತ್ರಿಸಿ : ಜೀವಿ ವೈವಿಧ್ಯ ಉಳಿಸಿ” ಎಂಬ ಉದ್ಘೋಷಣೆಯಡಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ : 2020 ಹಾಗೂ ನಗರ ಹಸಿರೀಕರಣ ಯೋಜನೆಯಡಿ ಪಟ್ಟಣದ ಬಡಾವಣೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಡಾವಣೆಯ ಮಕ್ಕಳು ಪರಿಸರ ಘೋಷಣಾ ಫಲಕಗಳನ್ನು ಹಿಡಿದು ಪರಿಸರ ಘೋಷಣೆಗಳ ಪ್ರಚುರಪಡಿಸಿದರು. ಈ ಸಂದರ್ಭ ಹೊಂಗೆ, ಬೇವು, ಸಂಪಿಗೆ, ಶ್ರೀಗಂಧ, ಮಹಾಗಣಿ ಗಿಡಗಳನ್ನು ನೆಡಲಾಯಿತು. ವಿಜ್ಞಾನ ಪರಿಷತ್ತಿನ ಪದಾಧಿಕಾರಿಗಳು,ಬಡಾವಣೆಯ ಹಸಿರು ಪಡೆ, ಪುಷ್ಪಾಂಜಲಿ ಮಹಿಳಾ ಸಂಘಟನೆಯ ಕಾರ್ಯಕರ್ತರು, ಪರಿಸರಾಸ್ತಕರು , ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ನಿವಾಸಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೋವಿಡ್ – 19 ರ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಗಿಡ ನೆಡಲಾಯಿತು.
ಪರಿಸರ ದಿನ ಮಹತ್ವ ಕುರಿತು ಮಾತನಾಡಿದ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕರೂ ಆದ ಕಾರ್ಯಕ್ರಮ ಸಂಘಟಕ ಟಿ.ಜಿ.ಪ್ರೇಮಕುಮಾರ್, ನಾವು ನೆಲ- ಜಲ, ಅರಣ್ಯ, ಜೀವಿ ವೈವಿಧ್ಯ ಸಂರಕ್ಷಣೆಯೊಂದಿಗೆ ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಬೇಕಿದೆ ಎಂದರು.
ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯು ಅರಣ್ಯ ಇಲಾಖೆ ಮತ್ತು ಪಟ್ಟಣ ಪಂಚಾಯ್ತಿ ಸಹಕಾರದೊಂದಿಗೆ ಪಟ್ಟಣದಲ್ಲಿ ಕಳೆದ 6 ವರ್ಷಗಳಿಂದ ಪಟ್ಟಣದಲ್ಲಿ ಗಿಡನೆಡುವ ಕಾರ್ಯದಲ್ಲಿ ತೊಡಗಿದೆ. ಪ್ರತಿಯೊಬ್ಬರೂ ಮನೆ ಬಳಿ ಗಿಡ ನೆಟ್ಟು ಬೆಳೆಸುವ ಮೂಲಕ ಪಟ್ಟಣದಲ್ಲಿ ಸ್ವಚ್ಛ ,ಸುಂದರ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಗಿಡನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎಸ್.ಎಂ.ಸುಜಯ್ ಕುಮಾರ್, ಪ್ರತಿಯೊಬ್ಬರೂ ತಮ್ಮನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು. ಪಟ್ಟಣದಲ್ಲಿ ಗಿಡನೆಟ್ಟು ಬೆಳೆಸುವ ಈ ಯೋಜನೆಗೆ ಪಂಚಾಯ್ತಿ ವತಿಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದರು. ಉತ್ತಮ ಪರಿಸರ ಸಂರಕ್ಷಣೆಗೆ ಎಲ್ಲರೂ ಪಣತೊಡಬೇಕು ಎಂದರು.
ಪಟ್ಟಣ ಪಂಚಾಯ್ತಿ ಸದಸ್ಯ ಕಲೀಮುಲ್ಲ ಪರಿಸರ ದಿನಾಚರಣೆಯ ಮಾಹಿತಿಯ ಕರಪತ್ರ ಬಿಡುಗಡೆಗೊಳಿಸಿದರು. ಭವಿಷ್ಯತ್ತಿನ ದೃಷ್ಠಿಯಿಂದ ನಾವು ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಉತ್ತಮ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು. ಗಿಡ- ಮರಗಳು ಪರಿಸರ ಸಮತೋಲನ ಕಾಪಾಡಲು ಪೂರಕವಾಗಿವೆ ಎಂದರು.
ತಾಲ್ಲೂಕು ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್.ಓ. ನಮನ ನಾರಾಯಣ ನಾಯ್ಕ್ ಮಾತನಾಡಿ, ಭವಿಷ್ಯತ್ತಿನ ದೃಷ್ಠಿಯಿಂದ ನಾವು ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಉತ್ತಮ ಪರಿಸರ ಸಂರಕ್ಷಣೆ ಮತ್ತು ಅಂತರ್ಜಲ ವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು. ಗಿಡ- ಮರಗಳು ಪರಿಸರ ಸಮತೋಲನ ಕಾಪಾಡಲು ಪೂರಕವಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಚ್.ಎಸ್.ಅಶೋಕ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎಸ್.ಎಂ.ಸುಜಯ್ ಕುಮಾರ್, ಹಿರಿಯ ನಾಗರಿಕ ಎಂ.ಎಚ್.ನಜೀರ್ ಅಹ್ಮದ್ ಗಿಡ ನೆಡುವ ಮೂಲಕ ಪರಿಸರ ಆಂದೋಲನಕ್ಕೆ ಚಾಲನೆ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಎಚ್.ಎಸ್.ರಾಜಶೇಖರ್ , ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು. ಪಟ್ಟಣ ಪಂಚಾಯ್ತಿ ಸದಸ್ಯ ಕಲೀಮುಲ್ಲಾ , ಆರೋಗ್ಯ ನಿರೀಕ್ಷಕ ಉದಯ್ ಕುಮಾರ್, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಎನ್.ವೆಂಕಟನಾಯಕ್, ಪದಾಧಿಕಾರಿಗಳಾದ ಜಿ.ಶ್ರೀನಾಥ್, ಜಿ.ಶ್ರೀಹರ್ಷ, , ಟಿ.ವಿ.ಶೈಲಾ, ನಿವೃತ್ತ ಉಪನ್ಯಾಸಕ ಕೆ.ವಿ.ಉದಯ್ ,ವಕೀಲ ಆರ್.ಕೆ.ನಾಗೇಂದ್ರಬಾಬು, ಪಂಚಾಯ್ತಿ ನೈಮರ್ಲ್ಯೀಕರಣದ ಮೇಲ್ವಿಚಾರಕ ಎಚ್.ಎನ್.ಮೋಹನ್ ಕುಮಾರ್, ಸಂಘಟನೆಗಳ ಪ್ರಮುಖರಾದ ಟಿ.ಎಸ್.ಶಾಂಭಮೂರ್ತಿ, ಎಚ್.ಪಿ.ಉದಯ್, ಎನ್.ಡಿ.ಯೋಗೇಶ್, ಟಿ.ಬಿ.ಮಂಜುನಾಥ್, ಎಚ್.ಜಿ.ಕುಮಾರ್, ಕೆ.ಬಿ.ರಾಜು, ಹಿರಿಯ ನಾಗರಿಕರಾದ ಎಂ.ಜಿ.ಪ್ರಕಾಶ್, ಮೂಡೇರ ಈರಪ್ಪ, ನಾರಾಯಣನ್, ಮಹಿಳಾ ಸಂಘಟನೆಯ ಪ್ರಮುಖರಾದ ವಿನು ಪೂವಯ್ಯ, ರೋಹಿಣಿ,ಗಾಯಿತ್ರಿ, ಸುಲೋಚನ, ಮಾಲತಿ, ಯಶೋಧ ಮಂದಣ್ಣ, ಹಸಿರು ಪಡೆ ಕಾರ್ಯಕರ್ತರು , ಬಡಾವಣೆಯ ವಿದ್ಯಾರ್ಥಿಗಳು, ಇತರರು ಇದ್ದರು.
ವರದಿ: ✍. ಟಿ.ಜಿ.ಪ್ರೇಮಕುಮಾರ್,