ಕಾಳುಮೆಣಸು ಸಸ್ಯ ಅರೋಗ್ಯ ನಿರ್ವಹಣೆಗೆ ಬಗ್ಗೆ ಕೆವಿಕೆ ಸಲಹೆ

Reading Time: 4 minutes

ಕಾಳುಮೆಣಸು ಸಸ್ಯ ಅರೋಗ್ಯ ನಿರ್ವಹಣೆಗೆ ಬಗ್ಗೆ ಕೆವಿಕೆ ಸಲಹೆ

ಮುಂಗಾರು ಇನ್ನೇನು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದೆ. ಮಣ್ಣು ತೇವಾಂಶದಿಂದ ಕೂಡಿರುತ್ತದೆ. ರೈತರುಗಳು ತಮ್ಮ ತಮ್ಮ ಬೆಳೆಗಳಿಗೆ ಗೊಬ್ಬರ ಕೊಡಲು ಸೂಕ್ತ ಸಮಯವಾಗಿದ್ದು, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು ಇವರು ಕಾಳು ಮೆಣಸಿನ ಸಸ್ಯ ಅರೋಗ್ಯ ನಿರ್ವಹಣೆಗೆ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹ ಎಂಬ ಸೂಕ್ಷ್ಮಾಣು ಜೀವಿಗಳ ಗೊಬ್ಬರವನ್ನು ಬಳಸಲು ಶಿಪಾರಸ್ಸು ಮಾಡಿದ್ದಾರೆ. ಆದ್ದರಿಂದ ಜಿಲ್ಲೆಯ ರೈತರು ಈ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಕಾಳುಮೆಣಸಿನಲ್ಲಿ ಬಳಸಿ ಇಳುವರಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಕೃಷಿ ವಿಜ್ಞಾನ ಕೇಂದ್ರ ರೈತರಲ್ಲಿ ಮನವಿ ಮಾಡಿದೆ.

ಈ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಕಾಳುಮೆಣಸಿಗೆ ಬಳಸುವುದರಿಂದ ಬಳ್ಳಿಗಳು ಹೊಸದಾಗಿ ಚಿಗುರು ಬರಲು, ಶೀಘ್ರ ಸೋರಗು ರೋಗವನ್ನು ಹತೋಟಿ ಮಾಡಲು, ಕೊತ್ತು ಬೀಳುವ ಸಮಸ್ಯೆಯನ್ನು ಕಡಿಮೆಮಾಡಲು ಮತ್ತು ಉತ್ತಮವಾಗಿ ಬೇರು ಬರಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವು ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಗುಣ ವಿಶೇಷತೆಯ ಪ್ರಾಮುಖ್ಯತೆ ಪಡೆದಿರುತ್ತವೆ. ಪ್ರಸ್ತುತ ಸೂಕ್ಷ್ಮಾಣು ಜೀವಿಗಳ ಬಳಕೆ ಬಗ್ಗೆ ಸರಿಯಾದ ಮಾಹಿತಿ ಇಲ್ಲದಿರುವುರಿಂದ, ಜೈವಿಕ ಸಂಪನ್ಮೂಲಗಳ ಮತ್ತು ತಂತ್ರಜ್ಞಾನದ ಕೊರೆತೆಯಿಂದಾಗಿ ಸೂಕ್ಷ್ಮಾಣು ಜೀವಿಗಳ ಬಳಕೆ ಕಡಿಮೆಯಾಗಿರುತ್ತದೆ. ಈ ಕೊರತೆ ನೀಗಿಸಲು ಮತ್ತು ಒಂದೇ ರೀತಿಯ ಸೂಕ್ಷ್ಮಾಣು ಜೀವಿಗಳ ಬಳಕೆಯಿಂದ ಉಂಟಾಗುವ ಅಧಿಕ ಖರ್ಚು ಮತ್ತು ಕಡಿಮೆ ಕಾರ್ಯ ಕ್ಷಮತೆಯ ನ್ಯೂನತೆಯನ್ನು ಹೋಗಲಾಡಿಸಲು ಭಾರತೀಯ ತೋಟಗಾರಿಕಾ ಸಂಶೋಧನ ಸಂಸ್ಥೆ, ಬೆಂಗಳೂರುರವರು ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಉತ್ಕೃಷ್ಟ ತಂತ್ರಜ್ಞಾನದೊಂದಿಗೆ ಅಭಿವೃದ್ದಿಪಡಿಸಿರುತ್ತಾರೆ.

ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವು ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲುವಿನಲ್ಲಿ ಲಭ್ಯವಿದ್ದು ಜಿಲ್ಲೆಯ ರೈತರು ಇದರ ಪ್ರಯೋಜನವನ್ನು ಪಡೆಯಬೇಕಾಗಿ ಕೋರಿದೆ.

ಸೂಕ್ಷ್ಮಾಣು ಜೀವಿಗಳ ಸಮೂಹದ ಉಪಯೋಗಗಳು: ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ (ಅಜಟೋಬ್ಯಾಕ್ಟರ್ ಟ್ರೋಪಿಕಾಲಸ್, ಬೆಸಿಲ್ಲಸ್ ಆರ್ಯಭಟ ಮತ್ತು ಸುಡೋಮೋನಾಸ್ ಥಾಯ್ವಾನೆನ್ಸಿಸ್) ಕಾರ್ಯಕ್ಷಮತೆ ಹೊಂದಿರುತ್ತದೆ.

ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಕಾಳುಮೆಣಸಿಗೆ ಬಳಸುವುದರಿಂದ ಬಳ್ಳಿಗಳು ಹೊಸದಾಗಿ ಚಿಗುರು ಬರಲು, ಶೀಘ್ರ ಸೋರಗು ರೋಗವನ್ನು ಹತೋಟಿ ಮಾಡಲು, ಕೊತ್ತು ಬೀಳುವ ಸಮಸ್ಯೆಯನ್ನು ಕಡಿಮೆ ಮಾಡಲು ಮತ್ತು ಉತ್ತಮವಾಗಿ ಬೇರು ಬರಲು ಸಹಾಯವಾಗುತ್ತದೆ.

ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹದ ಬಳಕೆಯಿಂದ ಸಸ್ಯದ ಬೆಳವಣಿಗೆ, ರೋಗ ನಿಯಂತ್ರಣ ಮತ್ತು ಇಳುವರಿ ಅಧಿಕಗೊಳ್ಳುತ್ತದೆ. ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಬೀಜೋಪಚಾರ, ಕೊಟ್ಟಿಗೆ ಗೊಬ್ಬರ ಮತ್ತು ಬೇವಿನ ಹಿಂಡಿಯ ಜೊತೆ ಮಿಶ್ರಣಮಾಡಿ ರೈತರು ಸುಲಭವಾಗಿ ಬಳಸಬಹುದು.

ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ ಸೂಕ್ಷ್ಮಾಣು ಜೀವಿಗಳನ್ನು ಬೇರೆ ಬೇರೆಯಾಗಿ ಹಾಕುವ ಅವಶ್ಯಕತೆಯಿಲ್ಲದೆ ರೈತರು ವಿವಿಧ ಬೆಳೆಗಳಿಗೆ ಬಳಸಬಹುದು. ಶಿಫಾರಸ್ಸು ಮಾಡಿದ ಸಾರಜನಕ ಮತ್ತು ರಂಜಕಯುಕ್ತ ಗೊಬ್ಬರಗಳಲ್ಲಿ ಶೇ. 25 ರಷ್ಟು ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಬಳಸುವ ವಿಧಾನ: ಕೊಟ್ಟಿಗೆ ಗೊಬ್ಬರ ಅಥವಾ ಕಹಿಬೇವಿನ ಹಿಂಡಿಗೆ ಸೇರಿಸುವ ವಿಧಾನ: 5 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು 500 ಕೆ.ಜಿ ಕೊಟ್ಟಿಗೆ ಗೊಬ್ಬರ ಅಥವಾ 2 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು 100 ಕೆ.ಜಿ ಕಹಿಬೇವಿನ ಹಿಂಡಿಯ ಜೊತೆ ಚೆನ್ನಾಗಿ ಮಿಶ್ರಣ ಮಾಡಿ ಕಾಳುಮೆಣಸು ಬೆಳೆಗಳಿಗೆ ಉಪಯೋಗಿಸಬೇಕು.

ಬೆಳೆಗಳಿಗೆ ನೇರವಾಗಿ ಉಪಯೋಗಿಸುವ ವಿಧಾನ: 4 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹ, ಒಂದು ಕೆ.ಜಿ ಬೆಲ್ಲ, 10 ಲೀಟರ್ ಗಂಜಳ ಮತ್ತು 10 ಕೆ.ಜಿ ಸಗಣಿಯನ್ನು 200 ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ 12 ಗಂಟೆಗಳ ಕಾಲ ಇಟ್ಟು ಕಾಳುಮೆಣಸಿನ ಗಿಡದ ಬುಡ ಭಾಗಕ್ಕೆ ನೇರವಾಗಿ (4 ರಿಂದ 5 ಲೀಟರ್‍ನಷ್ಟು) ಮೇ-ಜೂನ್, ಆಗಸ್ಟ್-ಸೆಪ್ಟಂಬರ್ ಮತ್ತು ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಸುರಿಯಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರು ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಗೋಣಿಕೊಪ್ಪಲು ದೂರವಾಣಿ: 08274-247274 ನ್ನು ಸಂಪರ್ಕಿಸುವಂತೆ ಕೋರಲಾಗಿದೆ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments