Kote Mariamma

Kote Mariamma ºÀ
Kote Mariamma gºÀ

ಶ್ರೀ ಕೋಟೆ ಮಾರಿಯಮ್ಮ ದೇವಾಲಯವು ಮಡಿಕೇರಿ ಕೋಟೆಯ ಹಿಂಭಾಗದ ಪೆನ್ಶನ್‍ಲೇನ್ ಬಳಿಯಿದೆ. ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾಗಿದ್ದು, ಭವ್ಯ ಇತಿಹಾಸವನ್ನು ಹೊಂದಿದೆ. ಈ ದೇವಿಯು ರಾಜನ ಆಸ್ಥಾನ ದೇವತೆಯಾಗಿ ರಾರಾಜಿಸುತ್ತಿದ್ದಳು. ಕ್ರಮೇಣ ರಾಜನ ದುರಾಡಳಿತ, ಅನಾಚಾರಗಳು ಎಲ್ಲೆ ಮೀರಿದಾಗ ದೇವಿಯು ಆತನಿಗೆ ಛೀಮಾರಿ ಹಾಕಿದಳು. ಇದಕ್ಕೆ ಕೋಪಗೊಂಡ ರಾಜನು ದೇವಿಯ ವಿಗ್ರಹವನ್ನು ಭಗ್ನಗೊಳಿಸಿ ಕೋಟೆಯ ಹಿಂಬದಿಯ ಬಾವಿಯಲ್ಲಿ ಎಸೆದನು. ಕೆಲ ಸಮಯದ ನಂತರ ಶ್ರೀ ಕೋಟೆ ಮಾರಿಯಮ್ಮ ತಾಯಿಯು " ಮುತ್ತು-ಮುತ್ತು" ಎಂಬ ದಂಪತಿಗಳಿಗೆ ಕನಸಿನಲ್ಲಿ ಕಾಣಿಸಿಕೊಂಡು ತನ್ನ ವಿಗ್ರಹವು ಬಾವಿಯಲ್ಲಿ ಇರುವುದಾಗಿಯೂ ಅದನ್ನು ಹೊರತೆಗೆದು ಪೂಜಿಸಬೇಕೆಂದು ತಿಳಿಸಿದಳು. ಆಕೆಯ ಮಾತನ್ನು ಪಾಲಿಸಿದ ಮುತ್ತು ದಂಪತಿಗಳು ವಿಗ್ರಹವನ್ನು ಹೊರತೆಗೆದು ಪೂಜಿಸಿ ಬಾವಿಯ ಸಮೀಪದಲ್ಲಿಯೇ ಪ್ರತಿಷ್ಠಾಪಿಸಿದರು. ಈ ಸಂದರ್ಭದಲ್ಲಿ ತನ್ನನ್ನು ಕೋಟೆಯಿಂದ ಹೊರಗಟ್ಟಿದ ರಾಜನ ಮೇಲೆ ಕೋಪದಿಂದ ಕೋಟೆಯ ಕಡೆ ತಿರುಗಿಯೂ ನೋಡುವುದಿಲ್ಲವೆಂದು ಕೋಟೆಗೆ ವಿರುದ್ಧ ದಿಕ್ಕಿಗೆ ಅಂದರೆ ಉತ್ತರಾಭಿಮುಖವಾಗಿ ನೆಲೆ ನಿಂತಳು. ಪುರಾತನವಾದ ಈ ದೇವಾಲಯದಲ್ಲಿ ಉದ್ಭವಲಿಂಗ ಮತ್ತು ಹುತ್ತವಿದ್ದು ಇತ್ತೀಚಿನ ಕೆಲವು ವರ್ಷಗಳ ಹಿಂದೆ ದೇವಾಲಯದ ಮುಂಭಾಗದಲ್ಲಿರುವ ಅರಳಿ ಮರದ ಬುಡದಲ್ಲಿ ನಾಗ ಪ್ರತಿಷ್ಠಾಪನೆಯನ್ನು ಮಾಡಲಾಗಿದೆ. ನವರಾತ್ರಿ, ಷಷ್ಠಿ, ಹಬ್ಬ ಹರಿದಿನಗಳಂದು ವಿಶೇಷ ಪೂಜೆಗಳು ನಡೆಯುತ್ತದೆ. ನವರಾತ್ರಿಯಂದು ಕರಗವನ್ನು ಹೊರಡಿಸುತ್ತಾರೆ. ನಂತರ ಕುಂಭ ಪೂಜೆ, ಶಾಂತಿ ಪೂಜೆಗಳು ನಡೆಯುತ್ತದೆ. ಈ ದೇವಾಲಯದ ಪೂಜೆಯನ್ನು ಗೌಳಿ (ಯಾದವ) ಜನಾಂಗದವರು ನೆರವೇರಿಸುತ್ತಾರೆ.
ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

Comments are closed.